ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಇತ್ತೀಚೆಗೆ ದಿಢೀರ್ ದಾಳಿ ನಡೆಸಿದ್ದರು. 2016ರಲ್ಲಿ ನಡೆದಿದೆ ಎನ್ನಲಾದ ಬೋರ್‌ವೆಲ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿತ್ತು. ಬೆಂಗಳೂರಿನಲ್ಲಿ ಬಿಬಿಎಂಪಿ ಕೊರೆಸಿದ್ದ ಬೋರ್‌ವೆಲ್‌ನಲ್ಲಿ 960 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಬಿಬಿಎಂಪಿ ವಿರುದ್ಧ ಮತ್ತೊಂದು ಬಹುಕೋಟಿ ಹಗರಣದ ಆರೋಪ ಕೇಳಿಬಂದಿದೆ


