Google search engine
Homeಕರ್ನಾಟಕ ಸುದ್ದಿಶೀಘ್ರದಲ್ಲೇ ಕೆಲವು ರಾಜ್ಯಗಳ ಅಧ್ಯಕ್ಷರ ಬದಲಾವಣೆ; ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಖರ್ಗೆ ಸುಳಿವು

ಶೀಘ್ರದಲ್ಲೇ ಕೆಲವು ರಾಜ್ಯಗಳ ಅಧ್ಯಕ್ಷರ ಬದಲಾವಣೆ; ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಖರ್ಗೆ ಸುಳಿವು

ಕಲಬುರಗಿ: ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ನಡುವೆ ಪೈಪೋಟಿ ಆರಂಭವಾಗಿದ್ದು, ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಮಹತ್ವದ ಸುಳಿವು ನೀಡಿದ್ದಾರೆ.

ಇಂದು ಕಲಬುರಗಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಶೀಘ್ರದಲ್ಲೇ ಕೆಲವು ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ. ಒಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದರು.

ಇದೇ ವೇಳೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಸಾಧ್ಯವಾಗುವುದಿಲ್ಲ. ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತದೆ. ಇನ್ನೆರಡು ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇನ್ನು ಎಂಟು ದಿನಗಳಲ್ಲಿ ನಮ್ಮಿಂದಲೇ ಪ್ರಕಟಣೆ ಹೊರ ಬೀಳಲಿದೆ ಎಂದು ಸ್ಪಷ್ಟಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular