Google search engine
Homeಅಪರಾಧಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ 17ಕ್ಕೂ ಹೆಚ್ಚು ಮಂದಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ 17ಕ್ಕೂ ಹೆಚ್ಚು ಮಂದಿಗೆ ಗಾಯ

11 feb 2025- ಕಾರವಾರ: ಕೆಎಸ್‌ಆರ್‌ಟಿಸಿ ಬಸ್ಸೊಂದು ಪಲ್ಟಿಯಾದ ಪರಿಣಾಮ 17ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿತ್ತು.

ಚಾಲಕನ ಅತೀ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಬಸ್ ಮರಕ್ಕೆ ಡಿಕ್ಕಿಯಾಗಿ ಪಲ್ಟಿ‌ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಗಂಭೀರ ಗಾಯಗೊಂಡ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ.

ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular